ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತ ದೇವೇಗೌಡರು ಹೇಳಿದ್ದು ಬೇಸರ ತಂದಿದೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಸುಳ್ಳು ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತೆಲ್ಲಾ ಮಾತಾಡಿದ್ದು ಬೇಸರ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಉಪಚುನಾವಣೆ ಫಲಿತಾಂಶ ಕುರಿತು ಸುದ್ದಿಗೊಷ್ಠಿ ನಡೆಸಿದ ವೇಳೆ ಮಾತನಾಡಿದ ಅವರು, ನಾನು ದೇವೇಗೌಡರ ಜೊತೆ ಕೆಲಸ ಮಾಡಿದ್ದೆ ಅವರು ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತ ದೇವೇಗೌಡರು ಹೇಳಿದ್ದು ಬೇಸರ ತಂದಿದೆ, ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ‌ ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇವೆ. ಸೋತಾಗ ಹೋರಾಟ ಮಾಡಿದ್ದೇವೆ.

Edited By : Ashok M
PublicNext

PublicNext

23/11/2024 08:35 pm

Cinque Terre

28.91 K

Cinque Terre

0

ಸಂಬಂಧಿತ ಸುದ್ದಿ