ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜೀವನದಲ್ಲಿ ಶಿಸ್ತು ಸಾಧಿಸುವ ಛಲ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ - ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಿದ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದರು.

ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/11/2024 08:51 pm

Cinque Terre

332

Cinque Terre

0

ಸಂಬಂಧಿತ ಸುದ್ದಿ