ಚನ್ನಮ್ಮನ ಕಿತ್ತೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!
ಚನ್ನಮ್ಮನ ಕಿತ್ತೂರು ತಾಲೂಕಿನ ದೇಗಾಂವ ಗ್ರಾಮದ ನರೇಶ ಯಲ್ಲಪ್ಪ ಅಗಸರ (28) ಶನಿವಾರ ಸಂಜೆ ಪರಸನಟ್ಟಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಮಾರು ನಾಲ್ಕು ವರ್ಷದಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 20 ದಿನಗಳ ರಜೆಯ ಮೇಲೆ ಸ್ವಗ್ರಾಮ ದೇಗಾಂವಕ್ಕೆ ಆಗಮಿಸಿದ್ದರು.
ರಜೆ ಮುಗಿದು ನಾಳೆ (ನವೆಂಬರ್ 24ರಂದು) ಮರಳಿ ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದರೆ, ಈಗ ಇಹಲೋಕವನ್ನೇ ತ್ಯಜಿಸಿದ್ದಾರೆ! ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹದ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್ಐ ಪ್ರವೀಣ್ ಕೋಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
23/11/2024 09:02 pm