ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ನೇತೃತ್ವದಲ್ಲಿ ಮೈಸೂರು ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಸಲಾಗಿದೆ. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕ್ಷೇತ್ರದ ತಜ್ಞರು,ಚಿಂತಕರು ಸಭೆಯಲ್ಲಿ ಭಾಗಿಯಾಗಿದ್ದರು. ನಗರದ ಬೆಳವಣಿಗೆ ವಿಸ್ತರಣೆ, ಆರ್ಥಿಕ ಬೆಳವಣಿಗೆ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆ, ಮೂಲಭೂತ ಸೌಕರ್ಯಗಳ ಬೆಳವಣಿಗೆ, ವಾಣಿಜ್ಯ,ಕೈಗಾರಿಕಾ ಬೆಳವಣಿಗೆ, ಪ್ರವಾಸೋದ್ಯಮ ಶೈಕ್ಷಣಿಕ ಮತ್ತು ಆರೋಗ್ಯ ಬೆಳವಣಿಗೆ ಕುರಿತು ವಿಸ್ತೃತ ಚರ್ಚೆಯಾದವು.
ಅಲ್ಲದೆ, ಸಂಪನ್ಮೂಲ ವ್ಯಕ್ತಿಗಳ ಸಮ್ಮುಖದಲ್ಲಿ ಮುಂದಿನ 50 ವರ್ಷಗಳ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮೈಸೂರಿನ ಜಿಲ್ಲಾ ಪಂಚಾಯತ್ನಲ್ಲಿ ಈ ಸಭೆ ನಡೆದು ಪ್ರಮುಖರ ಸಲಹೆ ಪಡೆಯಲಾಗಿದೆ.
PublicNext
23/11/2024 09:07 pm