ಕಾಗವಾಡ: ರಾಜ್ಯದಲ್ಲಿ ಇಂದು ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಬಿಜೆಪಿ ನಾಯಕರು ಅಭ್ಯರ್ಥಿಗಳ ಆಯ್ಕೆಯಲ್ಲಿ ಎಡವಿದ್ದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಕಾಗವಾಡ ವಿಧಾನಸಭಾ ಕ್ಷೇತ್ರದ ಖೀಳೆಗಾಂವ ಗ್ರಾಮದಲ್ಲಿ ಮಾಧ್ಯಮಗಳಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಇಂದು ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದ ಮಂತ್ರಿ ಮಂಡಲ ಒಗ್ಗಟ್ಟಿನಿಂದ ಕೆಲಸ ಮಾಡಿದೆ. ಆದರೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಸನಗೌಡ ಪಾಟೀಲ ಯತ್ನಾಳ ಎಂಬ ಎರಡು ಬಣಗಳಾಗಿವೆ. ಇದರಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿಯ ವಿರುದ್ಧ ವ್ಯಂಗ್ಯವಾಡಿದರು.
PublicNext
23/11/2024 09:08 pm