ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ:ಪ್ರಿಯಾಂಕ ಗಾಂಧಿ ನೀಡಿದ ಗೌರವಧನದ ವಾಗ್ದಾನ ಸಫಲವಾಗಿಲ್ಲಾ

ಚಳ್ಳಕೆರೆ: ಆರನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಹಿಸಿ ಹಮ್ಮಿಕೊಂಡಿರುವ ಬೆಳಗಾವಿ ಚಲೋ ಬೃಹತ್ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಕರೆ ನೀಡಿದರು.

ಚಳ್ಳಕೆರೆ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕರ್ತೆಯರ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು.

ಚುನಾವಣಾ ಸಂದರ್ಭದಲ್ಲಿ ಖಾನ್‌ಪುರ ಪ್ರಚಾರ ರ‍್ಯಾಲಿಯಲ್ಲಿ ಪ್ರಿಯಾಂಕ ಗಾಂಧಿ ಅಂಗನವಾಡಿ ಸಿಬ್ಬಂದಿಗೆ ಗೌರವಧನ ಹೆಚ್ಚಿಸುವ ಬಗ್ಗೆ ವಾಗ್ದಾನ ಮಾಡಲಾಗಿತ್ತು. ರಾಜ್ಯ ಸರ್ಕಾರ ಇದುವರೆಗೂ ಜಾರಿ ಮಾಡಿಲ್ಲ. ಕೇವಲ ಗೌರವಧನಕ್ಕೆ ಸರ್ಕಾರದ ವಿವಿಧ ಯೋಜನೆಗಳ ನಿರ್ವಹಣೆ ಮತ್ತು ಮಕ್ಕಳ ಪೋಷಣೆ ಮಾಡುವಲ್ಲಿ ಶ್ರಮಿಸುತ್ತಿದ್ದೇವೆ.

Edited By : PublicNext Desk
Kshetra Samachara

Kshetra Samachara

23/11/2024 09:13 pm

Cinque Terre

540

Cinque Terre

0

ಸಂಬಂಧಿತ ಸುದ್ದಿ