ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಚಿತ್ರಾಪು ಘಜನಿ, ಕಲ್ಸಂಕ ಹಾಗೂ ಪಡುಬೈಲು ಬಳಿ ಉಪ್ಪು ನೀರು ತಡೆಗೆ ನಿರ್ಮಾಣಗೊಂಡಿರುವ ಅಣೆಕಟ್ಟಿಗೆ ಸಂಬಂಧಪಟ್ಟ ಗುತ್ತಿಗೆದಾರರು ಹಲಗೆ ಹಾಕದೆ ನಿರ್ಲಕ್ಷ್ಯ ವಹಿಸಿದ್ದರು. ಪರಿಣಾಮ ಆ ಭಾಗದ ನೂರಾರು ಎಕರೆ ಗದ್ದೆಗೆ ಉಪ್ಪು ನೀರು ನುಗ್ಗಿ ಕೃಷಿಗೆ ತೀವ್ರ ಹಿನ್ನಡೆಯಾಗಿದೆ ಎಂದು ಸ್ಥಳೀಯ ಕೃಷಿಕರು ಆರೋಪಿಸಿದ್ದು ಪಬ್ಲಿಕ್ ನೆಕ್ಸ್ಟ್ ನಲ್ಲಿ ವರದಿಯಾಗಿತ್ತು.
ಅಲ್ಲದೆ ಉಪ್ಪು ನೀರು ಸೋರಿಕೆಯಾಗದಂತೆ ತಡೆಯಲು ಹಾಕಬೇಕಾಗಿದ್ದ ಹಲಗೆಗಳು ಎಲ್ಲೆಂದರಲ್ಲಿ ಚೆಲ್ಲಾ ಪಿಲ್ಲಿಯಾಗಿ ಬಿದ್ದುಕೊಂಡಿದ್ದು ಕೂಡಲೇ ಸರಿಪಡಿಸಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಕೃಷಿಕರಾದ ವಲೇರಿಯನ್ ರೆಬೆಲ್ಲೊ ಮತ್ತಿತರರು ಎಚ್ಚರಿಸಿದ್ದರು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಅಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತ ಸಂಬಂಧಪಟ್ಟ ಗುತ್ತಿಗೆದಾರರು ಅಣೆಕಟ್ಟಿಗೆ ಹಲಗೆ ಹಾಕಿ ಮಣ್ಣು ತುಂಬಿಸಿ ತಾತ್ಕಾಲಿಕವಾಗಿ ಸರಿಪಡಿಸಿದ್ದಾರೆ.
ಮುಲ್ಕಿ ನಗರ ಪಂಚಾಯತ್ ಮಾಸಿಕ ಸಭೆಯಲ್ಲಿ ಕೂಡ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸ್ತಾಪವಾಗಿದ್ದು, ವರದಿ ಬಿತ್ತರಿಸಿ ಕೃಷಿಕರ ಸಮಸ್ಯೆ ಬಗೆಹರಿಸಿದ ಪಬ್ಲಿಕ್ ನೆಕ್ಸ್ಟ್ ಗೆ ಸ್ಥಳೀಯ ಕೃಷಿಕರು ಧನ್ಯವಾದ ಅರ್ಪಿಸಿದ್ದಾರೆ.
PublicNext
24/11/2024 09:29 am