ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಹಲವು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಕಳಸ ತಾಲೂಕಿನ ಕಗ್ನಾಳ ಗ್ರಾಮದಲ್ಲಿ ಕಿರು ಸೇತುವೆ ಮೇಲೆ ನಡೆದಿದೆ. ಬಸ್ ಹೊರನಾಡಿನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು, ಲಾರಿಯೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿತ್ತು. ಕಿರು ಸೇತುವೆ ಮೇಲೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಾಯಾಳುಗಳನ್ನು ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

24/11/2024 06:56 pm

Cinque Terre

3.3 K

Cinque Terre

0

ಸಂಬಂಧಿತ ಸುದ್ದಿ