ಬೆಂಗಳೂರು : ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಾದ ಬಳಿಕ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಈಗ ದೆಹಲಿಗೆ ಹೋಗುತ್ತಿದ್ದೇನೆ.
ದೆಹಲಿಯಿಂದ ಬಂದ ನಂತರ ನಾನು ಮಾತನಾಡುತ್ತೇನೆ. ನಿಮ್ಮೆಲ್ಲರನ್ನೂ ಕರೆಸಿ ಚುನಾವಣೆಗೆ ಸಂಬಂಧಪಟ್ಟಂತೆ ಮಾತನಾಡುತ್ತೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದರು.
PublicNext
24/11/2024 08:24 pm