ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಬೇಡ್ಕರ್‌ ಅವರ ಸಂವಿಧಾನದಲ್ಲಿ ವಕ್ಫ ಕಾನೂನಿಗೆ ಅವಕಾಶವಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಕಾಂಗ್ರೆಸ್ ಪಕ್ಷ ತುಷ್ಟೀಕರಣಕ್ಕಾಗಿ ಹಲವು ಕಾನೂನುಗಳನ್ನು ಮಾಡಿಕೊಂಡಿದೆ. 2014ರಲ್ಲಿ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ದೆಹಲಿಯ ಸುತ್ತಮುತ್ತಲ ಕೆಲ ಪ್ರದೇಶಗಳನ್ನು ವಕ್ಫ ಮಂಡಳಿಗೆ ಸೇರಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕಾನೂನುಗಳನ್ನು ಮಾಡಿದೆ. ಅವರು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆಯೂ ತಲೆಕೆಡಿಸಿಕೊಳ್ಳಲಿಲ್ಲ. ಇದಕ್ಕೆ ಉದಾಹರಣೆ ವಕ್ಫ್ ಮಂಡಳಿ. ಪರಿಸ್ಥಿತಿ ಏನೆಂದರೆ, 2014ರಲ್ಲಿ ಕಾಂಗ್ರೆಸ್ ಅಧಿಕಾರ ಬಿಟ್ಟು ಕೆಳಗಿಳಿಯುವ ಸಂದರ್ಭದಲ್ಲಿ, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅನೇಕ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದಲ್ಲಿ ವಕ್ಫ್ ಕಾನೂನಿಗೆ ಸ್ಥಾನವಿಲ್ಲ, ಆದರೆ ಕಾಂಗ್ರೆಸ್ ತನ್ನ ಮತ ಬ್ಯಾಂಕ್‌ನ್ನು ಹೆಚ್ಚಿಸಲು ಇದನ್ನು ಮಾಡಿದೆ ಎಂದರು.

Edited By : Nirmala Aralikatti
PublicNext

PublicNext

24/11/2024 08:28 pm

Cinque Terre

23.82 K

Cinque Terre

4