ನವದೆಹಲಿ: ಸತತ ಮೂರನೇ ಬಾರಿ ಬಿಜೆಪಿಗೆ ಜನಾದೇಶ ನೀಡಿದ ಆರನೇ ರಾಜ್ಯ ಮಹಾರಾಷ್ಟ್ರವಾಗಿದೆ. ಈ ಬಾರಿ ಮಹಾರಾಷ್ಟ್ರ ಎಲ್ಲ ದಾಖಲೆಗಳನ್ನು ಮುರಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
50 ವರ್ಷದ ಇತಿಹಾದಲ್ಲೇ ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಚುನಾವಣಾ ಪೂರ್ವ ಮೈತ್ರಿಕೂಟಕ್ಕೆ ಸಿಕ್ಕ ಅತಿದೊಡ್ಡ ಗೆಲುವು ಇದಾಗಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮಹಾರಾಷ್ಟ್ರ ಸತತ ಮೂರನೇ ಬಾರಿಗೆ ಆಶೀರ್ವದಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೂರನೇ ಬಾರಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದಿದೆ ಎಂದರು.
PublicNext
24/11/2024 08:34 pm