ಧಾರವಾಡ: ಡಾ.ಎಂ.ಎಂ.ಕಲಬುರ್ಗಿ ಅವರ 86ನೇ ಜನ್ಮ ದಿನದ ಪ್ರಯುಕ್ತ ನ.28 ರಂದು ಬೆಳಿಗ್ಗೆ 11ಕ್ಕೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಭವನದಲ್ಲಿ ರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಕಲಬುರ್ಗಿ ಅವರ 86ನೇ ಜನ್ಮ ದಿನದ ಪ್ರಯುಕ್ತ ಧಾರವಾಡದ ಶ್ರೀ ವೀಣಾ-ವಾಣಿ ಸಂಗೀತ ವಿದ್ಯಾಲಯದ ಸಂಸ್ಥಾಪಕ, ಸಂಗೀತ ಉಪನ್ಯಾಸಕ, ಸಂಗೀತ ಮಾಂತ್ರಿಕ ಡಾ. ಶರಣಕುಮಾರ ಮೇಡೆದಾರ್ ಅವರಿಗೆ ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಹಾಗೂ ಮೈಸೂರಿನ ಹಿರಿಯ ಸಂಶೋಧಕ ಎಸ್.ಎಸ್.ತಾರಾನಾಥ್ ಅವರಿಗೆ ಡಾ.ಎಂ.ಎಂ. ಕಲಬುರ್ಗಿ ಸಂಶೋಧನ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನ ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಡಾ.ಎಂ.ಎಂ.ಕಲಬುರ್ಗಿ ಅವರ 86ನೇ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಶಸ್ತಿ ಪ್ರದಾನವನ್ನು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಯೋಜಿತ ಅಧ್ಯಕ್ಷ, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಪ್ರಧಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಎಂ.ಎಂ.ಕಲಬುರ್ಗಿ ಪ್ರತಿಷ್ಠಾನದ ಡಾ.ವೀರಣ್ಣ ರಾಜೂರ ವಹಿಸಲಿದ್ದಾರೆ. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರು ಕೆ.ಎಚ್.ಚನ್ನೂರು ಆಗಮಿಸಲಿದ್ದಾರೆ. ಉಮಾದೇವಿ ಕಲಬುರ್ಗಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಎಂ.ಎಂ.ಕಲಬುರ್ಗಿ ಪ್ರತಿಷ್ಠಾನದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
24/11/2024 08:37 pm