ಚನ್ನಪಟ್ಟಣ: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ.ಪಿ.ಯೋಗೇಶ್ವರ್ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.
ಇಲ್ಲಿ ಕಾಂಗ್ರೆಸ್ ಗೆಲುವಿಗೆ ಪರೋಕ್ಷವಾಗಿ ಬಿಜೆಪಿ ಹಾಗೂ ಜೆಡಿಎಸ್‌ನವರು ಸಪೋರ್ಟ್ ಮಾಡಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಅಶ್ವಥ್ ನಾರಾಯಣ್ ಆವತ್ತು ಏನ್ ಹೇಳಿದ್ರು? ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂತ ಅಶ್ವಥ್ ನಾರಾಯಣ್ ಹೇಳಿಲ್ವಾ? ಇದರ ಅರ್ಥ ಏನು? ಎಂದು ಪ್ರಶ್ನೆ ಮಾಡುವ ಮೂಲಕ ಬಿಜೆಪಿ ನಾಯಕರು ಒಳಗೊಳಗೆ ನಮ್ಮ ಅಭ್ಯರ್ಥಿಗೆ ಸಪೋರ್ಟ್ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಮಗೆ ಎಲ್ಲಾ ಪಾರ್ಟಿಯವ್ರೂ ಸಹಾಯ ಮಾಡಿದ್ದಾರೆ. ಕಾಂಗ್ರೆಸ್‌ಗೆ ಇದ್ದಿದ್ದು ಕೇವಲ 16 ಸಾವಿರ ವೋಟ್ ಈಗ ಜಾಸ್ತಿ ಆಗಿದೆ. ಬಿಜೆಪಿ ಅವ್ರೂ ಸಪೋರ್ಟ್ ಮಾಡಿದ್ದಾರೆ. ಬಿಜೆಪಿಯವ್ರು ನಮ್ಮ ಜೊತೆ ಬಂದು ನಿಂತುಕೊಳ್ಳದೇ ಹೋಗಿದ್ರೆ, ಪತ್ಯಕ್ಷವಾಗಿ ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಾ ಇರಲಿಲ್ಲ. ನಾನು ಅವರೆಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಡಿಕೆಶಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಮ್ಮ ಮೇಲೆ ಈಗ ಸಾಲ ಇದೆ. ಕ್ಷೇತ್ರದ ಜನ ನಮ್ಮ ಪರವಾಗಿ ಇದ್ದಾರೆ. ಈ ಗೆಲುವಿನ ಕ್ರೆಡಿಟ್ ಅಪೂರ್ವ ಸಹೋದರಿಗೆ ಸಲ್ಲಬೇಕಾಗಿಲ್ಲ. ಅಪೂರ್ವ ಸಹೋದರು ಎಂದಿದ್ದ ಎಚ್‌ಡಿಕೆಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಚನ್ನಪಟ್ಟಣ ಕ್ಷೇತ್ರ ಖಾಲಿ ಆದಾಗಿಂದ ಸಾಕಷ್ಟು ಪ್ರವಾಸ ಮಾಡಿದ್ವಿ. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ವೊ ಅದನ್ನ ಮೊದಲು ಇಂಪ್ಲಿಮೆಂಟ್ ಮಾಡಬೇಕು. ನಾನು ಯೋಗೇಶ್ವರ್ ಕೂತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡ್ತೇವೆ ಎಂದು ತಿಳಿಸಿದರು.
PublicNext
24/11/2024 10:48 pm