ಅಥಣಿ : ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರಣಗಿ ಗ್ರಾಮದಲ್ಲಿ ಗ್ರಾಮಸ್ಥರು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದು ಗ್ರಾಮ ಪಂಚಾಯಿತಿ ವಿರುದ್ಧ ಕಿಡಿಕಾರಿದ್ದಾರೆ.
ಗ್ರಾಮದ ಪ್ರಮುಖ ಕಾಲೋನಿಗಳಲ್ಲಿ ವಿದ್ಯುತ್ ನೀರು ಹಾಗೂ ಚರಂಡಿ ವ್ಯವಸ್ಥೆಯು ಕೂಡ ಇಲ್ಲದೆ ಜನರು ಅಸ್ತವ್ಯಸ್ತಗೊಂಡಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು ಜನರು ಹೈರಾನಾಗಿದ್ದಾರೆ. ಕೊಳಚೆ ನೀರಿನಿಂದ ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗಿದ್ದು ವೃದ್ದರು ಶಾಲಾ ಮಕ್ಕಳು ಸೊಳ್ಳೆಗಳ ಕಾಟದಿಂದ ಬೇಸತ್ತು ಹೋಗಿದ್ದಾರೆ.
ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಶೀಘ್ರವೇ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
PublicNext
25/11/2024 08:29 am