ಧಾರವಾಡ: ಕನ್ನಡ ನಾಡು ನುಡಿ ಸಂರಕ್ಷಣೆಗಾಗಿ ಪ್ರತಿಯೊಬ್ಬ ಕನ್ನಡಿಗರೂ ಶ್ರಮಿಸಬೇಕೆಂದು ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷರ ಹಾಗೂ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಅಭಿಪ್ರಾಯಪಟ್ಟರು.
ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ನುಡಿ ಜಾತ್ರೆ ಕನ್ನಡ ರಾಜ್ಯೋತ್ಸವ ನುಡಿ ಸಂಭ್ರಮ, ರಾಜ್ಯಮಟ್ಟದ ಕವಿಪೀಠ ಮಹಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದದ್ದು ಕನ್ನಡ ಭಾಷೆ. ಈ ಭಾಷೆಯ ಸೊಗಡು, ಹಿರಿಮೆಯನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಕನ್ನಡವು ಹಾಸುಹೊಕ್ಕಾಗಿದೆ. ಅತೀ ಹೆಚ್ಚು ಜ್ಞಾನ ಪೀಠ ಪ್ರಶಸ್ತಿಯನ್ನು ಪಡೆದಿರುವುದು ನಮ್ಮ ಭಾಷೆ ಎನ್ನುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸಮಾರಂಭದಲ್ಲಿ ಮುಂಡಗೋಡದ ಶ್ರೀಗಳು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಧಾರವಾಡದ ಅಧ್ಯಕ್ಷ ಎಸ್.ಎಫ್ ಸಿದ್ದನಗೌಡರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್.ಚುಳಕಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬಸವರಾಜ ಗುರಿಕಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ರಾಜ್ಯೋತ್ಸವ ನುಡಿ ಸಂಭ್ರಮದ ಪದಾಧಿಕಾರಿಗಳು, ಆಯೋಜಕರು, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
25/11/2024 03:48 pm