ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾನಗರದಲ್ಲಿ ಸಿಗ್ನಲ್ ಮುರಿದು ಬಿದ್ದರೂ ಕೂಡ ಯಾವುದೇ ಅಧಿಕಾರಿಗಳಾಗಲಿ, ಸಂಬಂಧಪಟ್ಟ ಇಲಾಖೆಯವರಾಗಲಿ ಕಣ್ಣು ಬಿಟ್ಟು ನೋಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಯ ಶಿರೂರ್ ಪಾರ್ಕ್ ಹೋಗುವ ಜನನಿಬಿಡ ಪ್ರದೇಶದಲ್ಲಿಯೇ ಮೂರರ ಪೈಕಿ ಸಂಚಾರಿ ಸಿಗ್ನಲ್ ಸೂಚಿಸುವ ವಿದ್ಯುತ್ ಚಾಲಿತ ಡಿಟೆಕ್ಟರ್ ಕಳಚಿ ಬಿದ್ದಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಂತಹದೊಂದು ಅವ್ಯವಸ್ಥೆಯನ್ನು ವಿಡಿಯೋ ಮಾಡಿ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನೂ ಬಹುತೇಕ ವಾಹನಗಳು ಇಲ್ಲಿಯೇ ಓಡಾಡುತ್ತಿದ್ದು, ಸಾಕಷ್ಟು ವಿದ್ಯಾಸಂಸ್ಥೆಗಳಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಓಡಾಡುತ್ತಾರೆ. ಹೀಗಿದ್ದರೂ ಇಂತಹದೊಂದು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
25/11/2024 04:21 pm