ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ - ಸಚಿವ ಜಾರ್ಜ್

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಭಿ ಹಾಗೂ ಸಂತೋಷದ ಜೀವನವನ್ನು ನಿರ್ವಹಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಕೈಗೆ ಹಣ ನೀಡುವುದರಿಂದ ಅವರು ತಮ್ಮ ಅಗತ್ಯತೆಗಳಿಗೆ ವ್ಯಯ ಮಾಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟುಗಳು ಹೆಚ್ಚುತ್ತವೆ. ಉತ್ಪಾದನೆ ಹೆಚ್ಚುತ್ತದೆ. ಉತ್ಪಾದನೆಗೆ ಮಾನವ ಸಂಪನ್ಮೂಲದ ಅವಶ್ಯಕತೆ ಇರುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತವೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ. ಆರ್ಥಿಕ ವ್ಯವಹಾರಗಳು ಹೆಚ್ಚುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯವು ಹೆಚ್ಚಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗುತ್ತವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಉತ್ತಮ ಬದುಕನ್ನು ಗುರಿಯಾಗಿರಿಸಿಕೊಂಡು ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ.

ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಯೋಜನೆಗಳು ಸಹಕಾರಿಯಾಗಿವೆ ಎಂದ ಅವರು ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಲ್ಲದೆ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

25/11/2024 06:59 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ