ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿವೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕರಿಸುತ್ತಿವೆ ಎಂದರು.
PublicNext
25/11/2024 07:18 pm