ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ವಿರಾಜಪೇಟೆ ಮಲೆ ಮಹದೇಶ್ವರ ದೇವಾಲಯದಲ್ಲಿ ಕೊನೆ ಕಾರ್ತಿಕ ಪೂಜೆ

ಕೊಡಗು: ವಿರಾಜಪೇಟೆ ಮಲೆತಿರುಕೆ ಬೆಟ್ಟದ ಮೇಲಿನ ಮಲೆ ಮಹದೇಶ್ವರ ದೇವಾಲಯದಲ್ಲಿ ಕಳೆದ ಮೂರು ವಾರಗಳಲ್ಲಿ ಕೂಡ ವಿಶೇಷ ಪೂಜೆ ನಡೆದಿದ್ದು, ಇಂದು ಕೊನೆಯ ಕಾರ್ತಿಕ ಮಾಸದ ಕೊನೆ ಸೋಮವಾರದಂದು ಬೆಳಗ್ಗೆ 5 ಗಂಟೆಯಿಂದಲೇ ಭಕ್ತರು ಆಗಮಿಸಿ ಪೂಜೆ ಮಾಡಿಸಿಕೊಂಡರು.

ದೇವಾಲಯದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಚಂಡ ಪ್ರಕಾಶ್ ಮಾತನಾಡಿ, ಈ ದೇವಾಲಯಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದ್ದು, ಪ್ರತಿದಿನವೂ ಬೆಳಗ್ಗೆ ಮತ್ತು ಸಂಜೆ ಪೂಜೆ ನಡೆಯುತ್ತದೆ. ಹಬ್ಬ ಹರಿದಿನಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

Edited By : Ashok M
PublicNext

PublicNext

25/11/2024 07:51 pm

Cinque Terre

27.26 K

Cinque Terre

0

ಸಂಬಂಧಿತ ಸುದ್ದಿ