ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಎಲ್ಲಾ ಮಕ್ಕಳಿಗೆ ಅನುಕೂಲವಾಗಲೆಂದು ಸರ್ಕಾರದಿಂದ ಉಚಿತ ಆನಲೈನ್ ಕೋಚಿಂಗ್ ಪ್ರಾರಂಭಿಸಲಾಗಿದೆ : ಸಚಿವ ಮಧು ಬಂಗಾರಪ್ಪ

ಸಿದ್ದಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರು ವ್ಯಯಿಸಬೇಕಿದೆ. ಇದರಿಂದ ಬಡವರಿಗೆ ತುಂಬಾ ಹೊರೆಯಾಗುತ್ತಿದೆ. ರಾಜ್ಯದ ಎಲ್ಲಾ ಮಕ್ಕಳಿಗೆ ಅನುಕೂಲವಾಗಲೆಂದು ಸರ್ಕಾರದ ವತಿಯಿಂದ ಉಚಿತ ಆನಲೈನ್ ಕೋಚಿಂಗ್ ಪ್ರಾರಂಭಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ ಹಾಗೂ ಮಧ್ಯಾಹ್ನ ಕೋಚಿಂಗ್ ಇರಲಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಬೇಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

 ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಕವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.

 ಸಿಇಟಿ, ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಉಚಿತ ಆನ್ ಲೈನ್ ಕೋಚಿಂಗ್ ಪ್ರಾರಂಭಿಸಲಾಗಿದೆ 

 ಇಂದಿನ ತಂತ್ರಜ್ಞಾನ ಯುಗದಲ್ಲಿ ಗಣಕವಿಜ್ಞಾನಕ್ಕೆ ಭಾರಿ ಬೇಡಿಕೆ ಬರುತ್ತಿದ್ದು, ಈ ಪ್ರಯೋಗಾಲಯಗಳನ್ನು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಆರಂಭಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಪಿಯು ಕಾಲೇಜುಗಳಿಗೆ 800 ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ತಯಾರಿ ನಡೆದಿದ್ದು ಫೆಬ್ರವರಿಯೊಳಗೆ ನೊಟಿಫಿಕೇಶನ್ ಹೊರಡಿಸಲಾಗುವುದು ಎಂದ ಅವರು, ಸರ್ಕಾರಿ ಶಿಕ್ಷಣದ ಬಗ್ಗೆ ಜನರಿಗೆ ವಿಶ್ವಾಸವಿದೆ ಎಂದರು . 

 ಅಧ್ಯಕ್ಷತೆ ವಹಿಸಿದ್ದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿದೆ.‌ ವಿದ್ಯಾರ್ಥಿಗಳು ಪಾಲಕರ ಕಷ್ಟಕ್ಕೆ ಬೆಲೆ ಕೊಟ್ಟು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಬೇಕು. ಹಾಳದಕಟ್ಟಾ ಕಾಲೇಜಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಹಂತ‌ಹಂತವಾಗಿ ಒದಗಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ  ಶಿಕ್ಷಣ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಗಣಕಯಂತ್ರಗಳಿಗೆ ತುಂಬಾ ಬೇಡಿಕೆಯಿದ್ದು, ಸರ್ಕಾರ ಇದಕ್ಕೆ ಉತ್ತೇಜನ ನೀಡಬೇಕು ಎಂದ ಅವರು, ಮಧು ಬಂಗಾರಪ್ಪ ಸಚಿವರಾದಾಗ ಶಿಕ್ಷಕರ ಕೊರತೆಯಿತ್ತು. ನ್ಯಾಯಾಲಯದ ಅಡೆತಡೆ ನಿವಾರಿಸಿ 13 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕ ಮಾಡಿದ್ದು ಅವರನ್ನು ಅಭಿನಂದಿಸುತ್ತೇನೆ ಎಂದರು.

Edited By : PublicNext Desk
Kshetra Samachara

Kshetra Samachara

25/11/2024 07:50 pm

Cinque Terre

7.42 K

Cinque Terre

0

ಸಂಬಂಧಿತ ಸುದ್ದಿ