ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಶ್ರದ್ದಾ ಭಕ್ತಿಯಿಂದ ನಡೆದ ಹೊಸೂರು ಬೆಟ್ಟದ ಬಸವೇಶ್ವರ ಸ್ವಾಮಿಯ ಕೌಟೇಕಾಯಿ ಜಾತ್ರೋತ್ಸವ

ಕೊಡಗು : ಹೊಸೂರು ಗ್ರಾಮದಲ್ಲಿರುವ ಬೆಟ್ಟದ ಬಸವೇಶ್ವರ ಸ್ವಾಮಿಯ ವಾರ್ಷಿಕ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿದ್ದು ಬೆಳಗ್ಗೆ 7 ಗಂಟೆಯಿಂದ ಬೆಟ್ಟದ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಲಾಯಿತು.

ಬೆಟ್ಟದ ಬಸವೇಶ್ವರ ಸ್ವಾಮಿಯ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಆರುನೂರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೌಟೆಕಾಯಿ ಜಾತ್ರೋತ್ಸವ ಕಾರ್ಯಕ್ರಮವನ್ನು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಎನ್.ಹರೀಶ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ವೈಜ್ಞಾನಿಕವಾಗಿ ನಾವು ಪ್ರಗತಿ ಕಾಣುತ್ತಿದ್ದರೂ ಗ್ರಾಮೀಣ ಸೊಗಡು ಸಂಸ್ಕೃತಿಯನ್ನು ನಶಿಸಿ ಹೋಗಲು ಬಿಡಬಾರದು’. ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಕೌಟೆಕಾಯಿ ಬಳ್ಳಿ ಹೇರಳವಾಗಿ ಬೆಳೆಯುತಿತ್ತು. ರೈತರು ಕೌಟೆಕಾಯಿ ಬಳ್ಳಿಯಿಂದ ಸಾವಯವ ಗೊಬ್ಬರ ಮಾಡುತ್ತಿದ್ದರು. ಅಲ್ಲದೆ ಕೌಟೆಕಾಯನ್ನು ರೋಗರುಜುನಗಳಿಗೆ ಔಷಧಿಯಾಗಿ ಉಪಯೋಗಿಸುತ್ತಿದ್ದರು.

ಆದರೆ ಈಗ ಹಳ್ಳಿಗಳಲ್ಲಿ ವೈಜ್ಞಾನಿಕ ಭರಾಟೆಯಿಂದ ಎತ್ತು ಜಾನುವಾರುಗಳ ಸಾಕಾಣಿಕೆ ಕಮ್ಮಿಯಾಗಿದೆ.

ಸಾವಯವ ಗೊಬ್ಬರ ಮರೆಯಾಗಿ ರಸಾಯಿನಿಕ ಗೊಬ್ಬರವನ್ನು ಬಳಸುತ್ತಾರೆ, ಇದರಿಂದ ಕೌಟೆಕಾಯಿ ಸಸ್ಯ ಕಣ್ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಜಾತ್ರೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿ ವತಿಯಿಂದ ಗಣ್ಯರನ್ನ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಜಾತ್ರೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Edited By : Ashok M
PublicNext

PublicNext

25/11/2024 08:24 pm

Cinque Terre

30.35 K

Cinque Terre

0

ಸಂಬಂಧಿತ ಸುದ್ದಿ