ಬೆಂಗಳೂರು: ಶಿಗ್ಗಾಂವಿ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವು ಬೆನ್ನಲ್ಲೇ ಶಿಗ್ಗಾಂವಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪ್ರಯತ್ನ ಮಾಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ನೀಡಿದ್ದಾರೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಅಜ್ಜಂಪೀರ್ ಖಾದ್ರಿ ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂಬ ಆಶಯ ಇಟ್ಟುಕೊಂಡಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ಪಠಾಣ್‌ಗೆ ಸಿಕ್ಕಿತ್ತು. ಹೀಗಾಗಿ ಕೋಪಗೊಂಡು ಬಂಡಾಯ ಸ್ಪರ್ಧೆ ಮಾಡಲು ನಾಮಪತ್ರ ಸಹ ಸಲ್ಲಿಸಿದ್ದರು. ಕೊನೆಗೆ ಜಮೀರ್ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕರೆದುಕೊಂಡು ಹೋಗಿ ಸಂಧಾನ ಮಾಡಿಸಿ ನಾಮಪತ್ರ ವಾಪಸ್ ಪಡೆಯವಂತೆ ಮನವೊಲಿಸಿದ್ದರು. ಈ ವೇಳೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ ನಿಮ್ಮನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಖಾದ್ರಿ ನಾಮಪತ್ರ ವಾಪಸ್ ಪಡೆದು ಪಠಾಣ್ ಗೆಲುವಿಗಾಗಿ ಶ್ರಮಿಸಿದರು. ಭರತ್ ಬೊಮ್ಮಾಯಿ ಸೊಲಿಗೆ ಪ್ರಮುಖ ಕಾರಣಿಕರ್ತರಾದ ಖಾದ್ರಿ ಅವರಿಗೆ ಸಿಎಂ ಸಿದ್ದರಾಮಯ್ಯ ಫೋನ್ ಮಾಡಿ ಅಭಿನಂದನೆಗಳು ತಿಳಿಸಿದ್ದರು. ಈಗ ಅಂದು ಸಂಧಾನ ಸಭೆಯಲ್ಲಿ ಮಾತುಕೊಟ್ಟಂತೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತಿದ್ದಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿಯನ್ನ ನೇಮಕ ಮಾಡಿದ್ದಾರೆ. ಆದ್ರೆ ಖಾದ್ರಿಯವರ ಕೆಲ ಬೆಂಬಲಿಗರು ನಿಗಮ ಮಂಡಳಿಕ್ಕಿಂತೆ ಅವರಿಗೆ ಎಂಎಲ್‌ಸಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
PublicNext
25/11/2024 08:27 pm