ಕೊಲ್ಲೂರು : ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು.ನಟ ಸೂರ್ಯ ಹಾಗೂ ಜ್ಯೋತಿಕಾ ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಕರ್ನಾಟಕದಲ್ಲೂ ಸಹ ಸೂರ್ಯ ಹಾಗೂ ಜ್ಯೋತಿಕಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.
Kshetra Samachara
26/11/2024 01:16 pm