ವಿಜಯಪುರ: ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜೈನಾಪುರದಲ್ಲಿ ನಡೆದಿದೆ.
ಮೃತ ಬಾಲಕ 4 ವರ್ಷದ ಬಸವರಾಜ್ ಮದರಿ ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತ ವೇಳೆ ರಸ್ತೆಯ ಮೇಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಬಾಲಕ ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಕಾರ್ ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಅಪಘಾತ ಮಾಡಿದ ಕಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
26/11/2024 03:01 pm