ಮೊಳಕಾಲ್ಮುರು : ಪಟ್ಟಣದ ಆಡಳಿತಸೌಧದಲ್ಲಿ ತಾಲೂಕು ಆಡಳಿತ ದಿಂದ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಗದೀಶ್ ಮಾತನಾಡಿ,ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.
PublicNext
26/11/2024 03:19 pm