ನವಲಗುಂದ : ಡಾ.ಬಾಬಾಸಾಹೇಬ ಅಂಬೇಡ್ಕರರವರು ರಚಿಸಿದ ಸಂವಿಧಾನವು ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಅವರು ಪಟ್ಟಣದ ತಾಲ್ಲೂಕಾ ಪಂಚಾಯತಿ ಸಭಾಭವನದಲ್ಲಿ ತಾಲ್ಲೂಕಾ ಆಡಳಿತ, ತಾಲ್ಲೂಕು ಪಂಚಾಯತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ಸಂವಿಧಾನ ದಿನಾಚರಣೆಯನ್ನು ಡಾ.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಹ ಶಿಕ್ಷಕರಾದ ರಮೇಶ ಕೋಟಗಿ ಉಪನ್ಯಾಸ ನೀಡಿದರು. ಶಿವು ಪೂಜಾರ ತಂಡ ಕ್ರಾಂತಿ ಗೀತೆ ಹಾಡಿದರು.
ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ತಾ ಪಂ ಇ ಓ ಭಾಗ್ಯಶ್ರೀ ಜಹಗೀರದಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಹೊಸಮನಿ, ಶೋಭಾ ಹಿರೇಮಠ, ಎಸ್.ಪಿ ಪೂಜಾರ, ರಾಧಾ ಕುಲಕರ್ಣಿ, ಎಸ್.ಬಿ.ಮಲ್ಲಾಡ ಸೇರಿದಂತೆ ಅನೇಕರು ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/11/2024 03:58 pm