ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING : ನಟ ದರ್ಶನ್ ಬೇಲ್‌ ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಅರ್ಜಿ ವಿಚಾರಣೆಯನ್ನು ಎರಡು ದಿನಗಳ ಕಾಲ ಅಂದರೆ ನವೆಂಬರ್ 28ಕ್ಕೆ ನಿಗದಿಪಡಿಸಿ ವಿಚಾರಣೆ ಮುಂದೂಡಲಾಗಿದೆ.

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ವಾದ ಪ್ರತಿವಾದಗಳು ಜರುಗಿದವು. ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನ್ನು ಉಲ್ಲೇಖ ಮಾಡಿ ದರ್ಶನ್‌ ಪರ ವಕೀಲರಾದ ಸಿವಿ ನಾಗೇಶ್‌ ವಾದವನ್ನು ಮಂಡಿಸಿದರು. ಈಗಾಗಲೇ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಕಾಲಾವಾಕಾಶ ಮುಗಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾ.ವಿಶ್ವಜಿತ್ ಶೆಟ್ಟಿ ಮುಂದೂಡಿದರು.

Edited By : Abhishek Kamoji
PublicNext

PublicNext

26/11/2024 05:06 pm

Cinque Terre

14.84 K

Cinque Terre

0

ಸಂಬಂಧಿತ ಸುದ್ದಿ