ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ವಕ್ಫ್ ವಿರೋಧಿ ಹೋರಾಟ - ಬಿಜೆಪಿಯಲ್ಲಿಯೇ ಹಗ್ಗ -ಜಗ್ಗಾಟ

ಬೀದರ್: ಬಿಜೆಪಿಯಲ್ಲಿನ ಭಿನ್ನಮತೀಯ ನಾಯಕರು ಎಂದು ಗುರುತಿಸಿಕೊಂಡಿರುವ ಹಲವರು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ಸೋಮವಾರ ರಾಜ್ಯವ್ಯಾಪಿ ವಕ್ಫ್ ವಿರೋಧಿ ಹೋರಾಟವನ್ನು ಬೀದರ್ ನಗರದಿಂದ ಆರಂಭಿಸಿದ್ದಾರೆ.

ಈ ಪ್ರತಿಭಟನೆಯ ಬ್ಯಾನರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭಾವಚಿತ್ರ ಇಲ್ಲದೇ ಇರುವುದರಿಂದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಬೀದರ್ ಜಿಲ್ಲೆಯ ಧರ್ಮಾಪುರ ಗ್ರಾಮದಲ್ಲಿ ಸ್ಥಳೀಯ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಬೆಂಬಲಿಗರು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ. ವಕ್ಫ್ ವಿರುದ್ಧ ಬಿಜೆಪಿ ರೆಬೆಲ್ಸ್ ತಂಡದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೃತೃತ್ವದಲ್ಲಿ ಶಿವಮೊಗ್ಗ ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಬೆಳಗಾವಿಯಿಂದ ಬೀದರ್‌ವರೆಗೆ ಹೋರಾಟ ಮಾಡುತ್ತಿದ್ದಾರೆ.

ಆದರೆ, ಧರ್ಮಾಪುರ ಗ್ರಾಮದಲ್ಲಿ ಸ್ಥಳೀಯ ಶಾಸಕ ಡಾ. ಶೈಲೇಂದ್ರ ಬೆಂಬಲಿಗರು ಈ ಹೋರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ವಕ್ಫ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳ ಅವರ ಬೆಂಬಲಿಗರು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ವಕ್ಫ್ ವಿರುದ್ಧ ಹೋರಾಟ ಮಾಡಿದವರು ಹಾಗೂ ವಿರೋಧ ಮಾಡಿದ ಎರಡೂ ಕಡೆಯವರು ಬಿಜೆಪಿ ಕಾರ್ಯಕರ್ತರೇ ಎಂಬುದು ಇಲ್ಲಿನ ಘಟನೆಯ ಸ್ವಾರಸ್ಯಕರ ಸಂಗತಿಯಾಗಿದೆ. ಇದೇನಿದು ಬಿಜೆಪಿ ಕಾರ್ಯಕರ್ತರ ವಕ್ಫ್ ವಿರುದ್ಧ ಹೋರಾಟಕ್ಕೆ ಬಿಜೆಪಿ ಕಾರ್ಯಕರ್ತರೇ ಅಡ್ಡಿಪಡಿಸುತ್ತಿದ್ದಾರೆ ಎಂಬುದು ನೋಡುಗರ ಆಶ್ಚರ್ಯಕ್ಕೆ ಕಾರಣವಾಗಿದೆ.

ಆದರೆ, ಇಲ್ಲಿ ಬಿಜೆಪಿಯಲ್ಲಿ ಎರಡು ಬಣಗಳ ನಡುವಿನ ಆಂತರಿಕ ಕೆಸರೆರಚಾಟ ಇದೀಗ ವಕ್ಫ್ ವಿರುದ್ಧ ಹೋರಾಟದ ಮೇಲೆ ಕಪ್ಪು ಛಾಯೆ ಮೂಡುವಂತೆ ಮಾಡಿದೆ. ಇದು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಲಾಭವಾಗುವುದು ಖಚಿತವಾಗಿದೆ.

ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್

Edited By : Vinayak Patil
PublicNext

PublicNext

26/11/2024 05:10 pm

Cinque Terre

10.87 K

Cinque Terre

0