ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಗರಂ ಆದ ರೈತರು - ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನ ಮರೆತಿದ್ದು, ಕೂಡಲೇ ಎರಡು ಸರ್ಕಾರಗಳು ಅವುಗಳನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಪೊರೇಟ್ ನೀತಿಯಿಂದಾಗಿ ರೈತರು ಕಾರ್ಮಿಕರು ದುಡಿಯುವ ವರ್ಗ ಹಾಗೂ ಸಣ್ಣಪುಟ್ಟ ವ್ಯಾಪಾರಸ್ಥರು ಬೀದಿಬದಿ ವ್ಯಾಪಾರಿಗಳು ಬೀದಿಗೆ ಬರುವಂತಾಗಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಇಲ್ಲದಂತಾಗಿದೆ. ಅತಿವೃಷ್ಟಿ ಅನಾವೃಷ್ಟಿಯಿಂದ ಬೆಳೆ ನಷ್ಟ ಉಂಟಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ, ಆದರೂ ಸಹ ಎರಡು ಸರ್ಕಾರಗಳು ರೈತರ ಸಹಾಯಕ್ಕೆ ಬಂದಿಲ್ಲ ಎಂದು ದೂರಿದ್ದಾರೆ.

ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದಾಗಿ ಮತ್ತು ಅನೇಕ ರೈತ ಪರವಾದ ವಿಚಾರಗಳನ್ನು ಜಾರಿಗೆ ತರುವುದಾಗಿ ಚುನಾವಣಾ ಸಂದರ್ಭದಲ್ಲಿ ಹೇಳಿದ್ದರು, ಆದರೆ ಇದ್ಯಾವುದನ್ನು ಕಾರ್ಯಗತಗೊಳಿಸಿಲ್ಲ ರೈತರ ಸಮಸ್ಯೆಗಳನ್ನ ಕೂಲಂಕುಶವಾಗಿ ಚರ್ಚಿಸುವ ಸಲುವಾಗಿ ಮೂರು ದಿನಗಳ ಕಾಲ ಜನತಾ ಅಧಿವೇಶನವನ್ನು ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಲ್ಲದೇ, ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನನ್ನ ಅರಣ್ಯ ಇಲಾಖೆಯಿಂದ ಡಿನೋಟಿಫೈ ಮಾಡಿಸಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಯಾವುದೇ ಕಾರಣಕ್ಕೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು ಮತ್ತು ಕೂಡಲೇ ಇವರುಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Edited By : Somashekar
PublicNext

PublicNext

26/11/2024 05:38 pm

Cinque Terre

13.42 K

Cinque Terre

0

ಸಂಬಂಧಿತ ಸುದ್ದಿ