ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎಂದು ಕೈ ಶಾಸಕನ ಹೇಳಿಕೆಗೆ ಡಿಕೆಶಿ ಗರಂ - ಗವಿಯಪ್ಪಗೆ ಶೋಕಾಸ್ ನೋಟಿಸ್

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆಗೆ ಉತ್ತರಿಸಿದ ಡಿಕೆಶಿ, ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ.

ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ ಎಂದು ತಿಳಿಸಿದರು.

Edited By : Suman K
PublicNext

PublicNext

26/11/2024 05:47 pm

Cinque Terre

45.72 K

Cinque Terre

6

ಸಂಬಂಧಿತ ಸುದ್ದಿ