ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರೈತರ, ಕೃಷಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

ಧಾರವಾಡ: ಸಂಘಟಿತ, ಅಸಂಘಟಿತ ಯೋಜನೆ ಕಾರ್ಯಕರ್ತರು, ಗುತ್ತಿಗೆ ಕಾರ್ಮಿಕರು ಮತ್ತು ಕೃಷಿ ವಲಯ ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಒದಗಿಸಬೇಕು, ಸಾಲಬಾಧೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರು ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ, ರೈತರಿಗೆ ಮತ್ತು ಕಾರ್ಮಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಕ್ಷಣಾ, ರೈಲ್ವೆ, ಆರೋಗ್ಯ, ಶಿಕ್ಷಣ, ವಿದ್ಯುತ್ ಸೇರಿದಂತೆ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸಾರ್ವಜನಿಕ ಸೇವೆಗಳ ಖಾಸಗೀಕರಣ ಮಾಡುವುದು ಬೇಡ. ಕೃಷಿ ಪಂಪ್‌ಗಳಿಗೆ ಉಚಿತ ವಿದ್ಯುತ್ ನೀಡಬೇಕು, ಅವುಗಳಿಗೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವುದು ಬೇಡ, ಗೃಹಬಳಕೆದಾರರಿಗೆ ಮತ್ತು ಅಂಗಡಿಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನರೇಗಾದಲ್ಲಿ ಎಲ್ಲರಿಗೂ ಖಾತ್ರಿ ಉದ್ಯೋಗ ಮತ್ತು ಉದ್ಯೋಗ ಭದ್ರತೆ, 200 ದಿನಗಳ ಕೆಲಸ ಮತ್ತು 600 ರೂಪಾಯಿ ದಿನಗೂಲಿ ನೀಡಿ ಇದನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಬೆಳೆಗಳು ಮತ್ತು ಜಾನುವಾರುಗಳಿಗೆ ಸಮಗ್ರ ಸಾರ್ವಜನಿಕ ವಲಯದ ವಿಮಾ ಯೋಜನೆ, ಬೆಳೆ ವಿಮೆ ಮತ್ತು ಗೇಣಿದಾರ ರೈತರಿಗೆ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವೀರೇಶ ಸೊಬರದಮಠ, ಬಿ.ಎಸ್.ಸೊಪ್ಪಿನ, ನಾಗಪ್ಪ ಉಂಡಿ, ಶರಣು ಗೋನವಾರ ಸೇರಿದಂತೆ ಅನೇಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Edited By : Somashekar
Kshetra Samachara

Kshetra Samachara

26/11/2024 05:49 pm

Cinque Terre

11.14 K

Cinque Terre

0

ಸಂಬಂಧಿತ ಸುದ್ದಿ