ಚಿಕ್ಕಮಗಳೂರು : ಕನ್ನಡ ಭಾಷೆ ನಮ್ಮ ನೆಲ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯ ಅಸ್ಮಿತೆ. ದೇಶದಲ್ಲೇ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಗಳಿಸಿದ ಪುಣ್ಯ ಭೂಮಿಯಲ್ಲಿ ಜನಿಸಿರುವುದಕ್ಕೆ ನಾವುಗಳು ಹೆಮ್ಮೆ ಪಡಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ಧ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದಲ್ಲಿ ಹಲವಾರು ಭಾಷೆಗಳಲ್ಲಿ ಅತ್ಯಂತ ಸುಂದರ ಭಾಷೆ ಕನ್ನಡ. ಆಯಾ ಪ್ರದೇಶದ ನಿವಾಸಿಗಳು ಭಾಷೆಯ ಸಂಸ್ಕೃತಿ ಪುರಾತನ ಇತಿಹಾಸವುಳ್ಳ ಕನ್ನಡತನವನ್ನು ಉಳಿಸಿ ಎಲ್ಲೆಡೆ ಹಬ್ಬಿಸುವ ಕಾರ್ಯ ಮಾಡಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಇತಿಹಾಸ ಕೊಂಡೊಯ್ಯಲು ಸಾಧ್ಯ ಎಂದರು.
Kshetra Samachara
26/11/2024 06:52 pm