ಶಿಗ್ಗಾವಿ : ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿ 6 ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ.
ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
26/11/2024 06:54 pm