ಕಾರವಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನವದೆಹಲಿ ಕೆಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಕಾರವಾರದ ಸೀಬರ್ಡ್ ನೌಕಾನೆಲೆಯಿಂದ ಉಂಟಾಗಿರುವ ಸಮಸ್ಯೆಯ ಕುರಿತು ಚರ್ಚಿಸಿದರು. ನೌಕಾನೆಲೆಯಲ್ಲಿ ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ನೀಡಬೇಕು.
ಜತೆಗೆ ಬಾಕಿ ಇರುವ ಇತರೆ ಸಮಸ್ಯೆಗಳ ಕಡತಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಮನವಿ ಮಾಡಿದರು. ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಸಿಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕೆಂದು ಎಮದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
PublicNext
26/11/2024 09:06 pm