ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: 'ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಭೇಟಿ ನೀಡಿ ಆರೋಗ್ಯ ಪರಿಶೀಲಿಸಿ' - ಸೋಮಶೇಖರ ಮೇಸ್ತಾ

ಕಾರವಾರ: ತಾಲೂಕಿನಲ್ಲಿನ ವಿವಿಧ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಪ್ರಾತಮಿಕ ಆರೋಗ್ಯ ಅಧಿಕಾರಿಗಳು ತಿಂಗಳಿಗೆ ಒಮ್ಮೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಕಾರವಾರ ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಸೋಮಶೇಖರ ಮೇಸ್ತಾ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಅಕ್ಷರ ದಾಸೋಹದಲ್ಲಿ ಮಧ್ಯಾಹ್ನದ ಬೀಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ಆಹಾರ, ಮೊಟ್ಟೆ, ಹಾಲು ಮೆನು ಪ್ರಕಾರ ನೀಡಬೇಕು. ಕೆಲವು ಕಡೆಗಳಲ್ಲಿ ಗ್ಯಾಸ್ ಮತ್ತು ಸಿಲೀಂಡರ್ ತೊಂದರೆಯಿದ್ದು ಅದನ್ನು ಸರಿ ಪಡಿಸಿಕೊಳ್ಳಬೇಕು. ತಾಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ತಪಾಸಣೆ ನಡೆಸಬೇಕು. ಅದರ ವರದಿಯನ್ನು ಮುಂದಿನ ಸಭೆಯಲ್ಲಿ ಸಲ್ಲಿಸುವಂತೆ ಆರೋಗ್ಯ ಆಧಿಕಾರಿಗಳಿಗೆ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

26/11/2024 09:09 pm

Cinque Terre

2.84 K

Cinque Terre

0