ತುಮಕೂರು : ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ 2 ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ವೀಕರಿಸಿದರು.
ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ನಂತರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸಂತಸ ಹಂಚಿಕೊಂಡರು.
PublicNext
26/11/2024 09:36 pm