ಮೈಸೂರು: ಡಿವೈಡರ್‌ಗೆ ಡಿಕ್ಕಿಯಾದ ಶಾಲಾ ಬಸ್ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನ ಫೌಂಟೇನ್ ವೃತ್ತದ ಬಳಿ ಘಟನೆ ನಡೆದಿದೆ.
ಘಟನೆ ವೇಳೆ ಬಸ್‌ನಲ್ಲಿ ಸುಮಾರು 30 ಮಕ್ಕಳು ಇದ್ದರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಶಾಂತಿನಿಕೇತನ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಮೈಸೂರು ಪ್ರವಾಸಕ್ಕಾಗಿ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಘಟನೆ ಸಂಭವಿಸಿದೆ. ಗಾಯಾಳು ಮಕ್ಕಳನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
26/11/2024 10:39 pm