ನಂಜನಗೂಡು: ನಗರದ ರೈಲ್ವೆ ಮೇಲ್ಸೇತುವೆಯ ಸರ್ವಿಸ್ ರಸ್ತೆಯಲ್ಲಿ ವ್ಯಕ್ತಿ ಒಬ್ಬನನ್ನು ಆಯುಧದಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಗರದ ಚಾಮಲಾಪುರ ಹುಂಡಿ ಗ್ರಾಮದ ಮಾದೇಶ (55) ಕೊಲೆಯಾದ ದುರ್ದೈವಿ.
ಗಾರೆ ಕೆಲಸ ಮಾಡಿಕೊಂಡಿದ್ದ ಮಾದೇಶ ಮಂಗಳವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಸೇರಿಕೊಂಡು ನಗರದ ಫ್ಲೈಓವರ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕುಡಿದು ಪಾರ್ಟಿ ನಡೆಸಿದ್ದರು. ಇದೆ ವೇಳೆ ಮಧ್ಯದ ವಿಚಾರಕ್ಕೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಅಂತಿಮವಾಗಿ ಸ್ನೇಹಿತರೆ ಆಯುಧದಿಂದ ಮತ್ತು ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿದ್ದಾರೆ. ಯಾರೋ ದುಷ್ಕರ್ಮಿಗಳು ನನ್ನ ತಂದೆಯನ್ನು ಕುತ್ತಿಗೆಗೆ ಟವಲ್ ಬಿಗಿದು, ಆಯುಧದಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದು. ಕೊಲೆಗೈದಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಮೃತ ಮಾದೇಶನ ಮಗ ರಾಜು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
26/11/2024 10:49 pm