ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ : ಮಂಗನ ಕಾಯಿಲೆ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯ ಕ್ರಮ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಾಗರ : ಮಂಗನ ಕಾಯಿಲೆ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುತ್ತದೆ. 2026ಕ್ಕೆ ಮಂಗನ ಕಾಯಿಲೆಗೆ ವ್ಯಾಕ್ಸಿನ್ ಕಂಡು ಹಿಡಿಯಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ತಾಲ್ಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಎಫ್‌ಡಿ ಸಂತ್ರಸ್ತ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಸಭೆ ನಡೆಸಿ ಅವರು ಮಾತನಾಡುತ್ತಾ ಮಂಗನಕಾಯಿಲೆಯಿಂದ ಯಾರೂ ಸಾಯಬಾರದು ಎನ್ನುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಮಂಗನ ಕಾಯಿಲೆಗೆ ಈತನಕ ಚುಚ್ಚುಮದ್ದು ಕಂಡು ಹಿಡಿದಿಲ್ಲ.

ಕಾಯಿಲೆ ಹರಡದಂತೆ ತಡೆದರೆ ಯಾರಿಗೂ ತೊಂದರೆ ಆಗುವುದಿಲ್ಲ. ಕೆಎಫ್‌ಡಿಗೆ ವ್ಯಾಕ್ಸಿನ್ ಕಂಡು ಹಿಡಿಯುವುದು ನಮ್ಮ ಮುಂದಿರುವ ಪ್ರಮುಖ ಗುರಿಯಾಗಿದೆ. ದೆಹಲಿಗೆ ಹೋಗಿ ಈ ಸಂಬಂಧ ಪ್ರಯತ್ನ ನಡೆಸಲಾಗಿತ್ತು. ಹಳೆಯ ವ್ಯಾಕ್ಸಿನ್‌ನಿಂದ ಯಾವುದೇ ಪ್ರಯೋಜನ ಇಲ್ಲದೆ ಇರುವುದರಿಂದ ಅದನ್ನು ಉಪಯೋಗಿಸದಂತೆ ಸೂಚನೆ ನೀಡಲಾಗಿದೆ.

ಹೊಸ ವ್ಯಾಕ್ಸಿನ್ ಕಂಡು ಹಿಡಿಯಲು ಹೈದರಾಬಾದ್‌ನ ಸಂಸ್ಥೆಯೊಂದಕ್ಕೆ ವ್ಯಾಕ್ಸಿನ್ ಕಂಡು ಹಿಡಿಯಲು ಸಿ.ಎಸ್.ಆರ್. ಫಂಡ್‌ನಿಂದ ಹತ್ತು ಕೋಟಿ ಕೊಡಲು ಸಿದ್ದತೆ ನಡೆದಿದೆ. ವ್ಯಾಕ್ತಿನ್ ತಯಾರಿಕೆ ಪ್ರಾರಂಭವಾಗಿದ್ದು 2026ಕ್ಕೆ ಕೊಡುವುದಾಗಿ ಸಂಸ್ಥೆ ತಿಳಿಸಿದೆ. ವ್ಯಾಕ್ಸಿನ್ ಇದ್ದರೆ ಯಾರೂ ಯಾರೂ ಆತಂಕಕ್ಕೆ ಒಳಗಾಗುವುದಿಲ್ಲ. 2025ರಲ್ಲಿ ಕೆಎಫ್‌ಡಿ ಹರಡದಂತೆ ಅಗತ್ಯ ನಿಗಾವಹಿಸಲಾಗುತ್ತದೆ ಎಂದರು.

ಕೆಎಫ್‌ಡಿ ಸಂಶೋಧನಾ ಘಟಕ ವೈಜ್ಞಾನಿಕವಾಗಿ ಜನರಿಗೆ ಅನುಕೂಲವಾಗುವಂತೆ ಸ್ಥಾಪಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಹಂದಿಗೋಡು ಕಾಯಿಲೆ ಕುರಿತು ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಹಂದಿಗೋಡು ಕಾಯಿಲೆ ಕುರಿತು ಸಹ ಚರ್ಚೆ ನಡೆಸಲಾಗುತ್ತದೆ.

ಶಾಸಕ ಗೋಪಾಲಕೃಷ್ಣ ಬೇಳೂರು, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಪ್ರಮುಖರಾದ ಪಲ್ಲವಿ, ಸುಂದರೇಶ್, ರವಿಕುಮಾರ್, ಲಕ್ಷಿ, ಡಾ. ಹರ್ಷವರ್ಧನ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Edited By : PublicNext Desk
PublicNext

PublicNext

26/11/2024 10:50 pm

Cinque Terre

15.01 K

Cinque Terre

0

ಸಂಬಂಧಿತ ಸುದ್ದಿ