ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್‌ನವರು ಸಂವಿಧಾನದ ಕೊಲೆಗೆ ಯತ್ನಿಸಿದ್ದಾರೆ. ರಾಜೀವ್ ಗಾಂಧಿ ಅವರಿಗೆ ಭಾರತ ರತ್ನ ಕೊಟ್ಟ ಕಾಂಗ್ರೆಸ್ ಆ ವಿಚಾರದಲ್ಲೂ ಅಂಬೇಡ್ಕರ್ ಅವರನ್ನು ನಿರ್ಲಕ್ಷಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು ಅಂಬೇಡ್ಕರ್ ಅವರ ಸಂವಿಧಾನಕ್ಕೆ ಕಾಂಗ್ರೆಸ್ ಅಪಚಾರ ಮಾಡುತ್ತಲೇ ಬಂದಿದೆ. ದೇಶದ ಸಂವಿಧಾನಕ್ಕೆ ಹಾಗೂ ಅಂಬೇಡ್ಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿಷ್ಟು ಪ್ರಾಮುಖ್ಯತೆಯನ್ನು ಬೇರೆ ಯಾರೂ ನೀಡಿಲ್ಲ ಎಂದು ಇದೇ ವೇಳೆ ಜೋಶಿ ಹೇಳಿದರು.
PublicNext
26/11/2024 11:02 pm