ಸಿಡ್ನಿ: 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ನಿಷೇಧಗೊಳಿಸುವ ಮಸೂದೆಗೆ ಆಸ್ಟ್ರೇಲಿಯಾದ ಜನಪ್ರತಿನಿಧಿಗಳ ಸಭೆಯು ಇಂದು ಅಂಗೀಕರಿಸಿದೆ.
ಟಿಕ್‌ಟಾಕ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್ ಮತ್ತು ಇನ್‌ಸ್ಟಾಗ್ರಾಂ ಮುಂತಾದವುಗಳು ತಮ್ಮ ಜಾಲತಾಣದಲ್ಲಿ ಚಿಕ್ಕ ಮಕ್ಕಳು ಖಾತೆಗಳನ್ನು ಹೊಂದುವುದನ್ನು ನಿಷೇಧಿಸುವುದು ಕಡ್ಡಾಯವಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ 50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ದಂಡ ವಿಧಿಸಲು ನಿರ್ಧರಿಸಿದೆ.
ಜನ ಪ್ರತಿನಿಧಿಗಳ ಸಭೆಯು ಇದನ್ನು ಮಸೂದೆಗೊಳಿಸಲು ಸೆನೆಟ್‌ಗೆ ವರ್ಗಾಯಿಸಿದೆ. ಈ ಮಸೂದೆ ಕುರಿತು ಸೆನೆಟ್ ಚರ್ಚಿಸಲಿದೆ ಎಂದು ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳ ಬಳಕೆಯೂ ಅಧಿಕವಾಗಿದ್ದು, ಮಕ್ಕಳು ಆನ್ಲೈನ್ ಪೋರ್ಟಲ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ಸಭೆಯು ಹೇಳಿದೆ.
PublicNext
27/11/2024 04:10 pm