Av
Headline
ಕೋಲಾರ - ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ
ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ, ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
27/11/2024 04:11 pm