ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳಿಗಾಲದಲ್ಲಿ ಹೆಚ್ಚುವ ಹೃದಯಾಘಾತ : ಈ ಬಗ್ಗೆ ತಜ್ಞರ ಸಲಹೆಯೇನು ?

ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಳಿಗಾಲ ಬಂತೆಂದರೆ ಸಾಕು ಹಲವಾರು ಅರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಮತ್ತೊಂದೆಡೆ, ಈ ಚಳಿಗಾಲದಲ್ಲಿ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್ ‌ನಂತಹ ಕಾರಣಗಳಿಂದ ಸಾಯುವವರ ಸಂಖ್ಯೆಯೂ ಹೆಚ್ಚು ಎಂದು ಅಂಕಿಅಂಶಗಳು ತೋರಿಸುತ್ತವೆ. ಇತರ ಸೀಸನ್​ಗಳಿಗೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯದ ಮೇಲಿನ ಒತ್ತಡ ಹೆಚ್ಚು ಎನ್ನುತ್ತಾರೆ ತಜ್ಞರು. ಹೀಗಾಗಿ ಹೃದಯ ಸಂಬಂಧಿ ಸಮಸ್ಯೆಗಳಿರುವವರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅಷ್ಟಕ್ಕೂ ಈ ಸೀಸನ್​​ನಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣಗಳೇನು ಎಂದು ನಾವೀಗ ತಿಳಿಯೋಣ..

ಸ್ವೀಡನ್​ನ ವಿಶ್ವವಿದ್ಯಾನಿಲಯದ ಸಂಶೋಧನೆಯು ತಾಪಮಾನ ಮತ್ತು ಹೃದ್ರೋಗದ ನಡುವಿನ ಸಂಬಂಧವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿಶೇಷವಾಗಿ ಚಳಿಗಾಲದಲ್ಲಿ ತಾಪಮಾನವು ಶೂನ್ಯ ಡಿಗ್ರಿ ಗಿಂತ ಕಡಿಮೆಯಾದಾಗ ಹೃದಯಾಘಾತದ ಬೆದರಿಕೆ ಹೆಚ್ಚಾಗುತ್ತದೆ ಎಂಬ ತೀರ್ಮಾನಕ್ಕೆ ಸಂಶೋಧಕರು ಬಂದಿದ್ದಾರೆ.

ಚಳಿಗಾಲದಲ್ಲಿ ರಕ್ತನಾಳಗಳು ಕಿರಿದಾಗುತ್ತವೆ. ಇದರಿಂದ ರಕ್ತದೊತ್ತಡವು ಹೆಚ್ಚಾಗುತ್ತದೆ. ಇದರಿಂದ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚಿದೆ. ಚಳಿಗಾಲದಲ್ಲಿ, ಬೆಳಗ್ಗೆ ತಾಪಮಾನದ ಕುಸಿತದಿಂದಾಗಿ, ದೇಹದ ಉಷ್ಣತೆಯು ಕಡಿಮೆಯಾಗುತ್ತದೆ. ತಾಪಮಾನವು ಶೂನ್ಯಕ್ಕಿಂತ ಕಡಿಮೆಯಾದಾಗ, ಹೃದಯಾಘಾತದ ಅಪಾಯವು ಒಂದೇ ದಿನದಲ್ಲಿ ನಾಲ್ಕು ಬಾರಿ ಹೆಚ್ಚಾಗುತ್ತದೆ.

ಸೂರ್ಯನ ಬೆಳಕಿನ ಕೊರತೆ, ಬಲವಾದ ಶೀತ ಗಾಳಿ ಹಾಗೂ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆಯಂತಹ ಪರಿಸ್ಥಿತಿಗಳಲ್ಲಿ, ನಮ್ಮ ದೇಹದಲ್ಲಿ ತಾಪಮಾನವನ್ನು ಹೆಚ್ಚಿಸುವ ಸಾಮರ್ಥ್ಯವು ಕಡಿಮೆಯಾಗುತ್ತದೆ. ಇದರ ಪರಿಣಾಮ ನೇರವಾಗಿ ಆಂತರಿಕ ಅಂಗಗಳ ಮೇಲೆ ಬೀರುತ್ತದೆ. ರಕ್ತನಾಳಗಳು ಶೀತಕ್ಕೆ ಪ್ರತಿಕ್ರಿಯಿಸಿ, ಅಪಧಮನಿಗಳಲ್ಲಿ ರಕ್ತದೊತ್ತಡ ಹೆಚ್ಚುತ್ತದೆ ಮತ್ತು ತೀವ್ರ ನಡುಕ ಮತ್ತು ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹಾಗಾಗಿ ಹೃದಯ ಸಮಸ್ಯೆ ಇರುವವರು ಈ ಚಳಿಗಾಲದಲ್ಲಿ ನೇರವಾಗಿ ಚಳಿಗೆ ಹೋಗದೆ ಬೆಚ್ಚಗಿನ ವಾತಾವರಣದಲ್ಲಿ ಇರಲು ಪ್ರಯತ್ನಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

Edited By :
PublicNext

PublicNext

27/11/2024 06:51 pm

Cinque Terre

11.35 K

Cinque Terre

0

ಸಂಬಂಧಿತ ಸುದ್ದಿ