ಕೊಡಗು: ಹೆಬ್ಬೆಟ್ಟಗೇರಿ ಗ್ರಾಮದ ಇಂದ್ರಪ್ರಸ್ಥ ನಗರದ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ 7ನೇ ವರ್ಷದ ಕೋಲೋತ್ಸವ ಡಿ.1ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಸ್ವಾಮಿ ಕೊರಗಜ್ಜ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಅಜಿತ್ ಚಿಣ್ಣಪ್ಪ ಸಬ್ಬುಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹಾಗೂ 10 ಗಂಟೆಗೆ ಶ್ರೀ ಕೊರಗಜ್ಜ ದೈವಕ್ಕೆ ಮಹಾ ಮಂಗಳಾರತಿ, 11 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಕೋಲೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಹಾಗೂ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ. ಡಿ.8ರಂದು ಬೆಳಿಗ್ಗೆ 8 ಗಂಟೆಗೆ ಸ್ವಾಮಿ ಕೊರಗಜ್ಜ ದೈವಕ್ಕೆ ಕೋಳಿ ಬೇಟೆ ನಡೆಯಲಿದ್ದು, ಬಳಿಕ ಅಗೇಲು ಪ್ರಸಾದ ನೆರವೇರಲಿದೆ ಎಂದು ಅಜಿತ್ ತಿಳಿಸಿದರು.
Kshetra Samachara
27/11/2024 07:04 pm