ಶಿರಸಿ:
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಕಾಮಗಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಡಿ. 2 ರಿಂದ 25 -2-2025 ರ ವರೆಗೆ ಬಂದ್ ಆಗಲಿದ್ದು ಬದಲಿ ಮಾರ್ಗ ಸೂಚಿಸಲಾಗಿದೆ.
ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಕುಮಟಾ-ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 766-ಇ ಲಘು ವಾಹನಗಳು ಸಂಚರಿಸಬಹುದು. ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ಮತ್ತು ರಾಜ್ಯ ಹೆದ್ದಾರಿ-93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ-766 ಇ ಕುಮಟಾ-ಶಿರಸಿ ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿ ಸಮಯದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶದಂತೆ ಬದಲಿ ಮಾರ್ಗದಲ್ಲಿ ಸಂಚರಿಸಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
27/11/2024 07:27 pm