ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಯುವಜನೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ವಿಜಯಪುರ: ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ 19 ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಇನ್ನೂ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರಿಗೂ ಜೀವನದಲ್ಲಿ ಗುರಿ ಇರಬೇಕು. ಜೀವನದಲ್ಲಿ ಗುರಿ ಇಲ್ಲದ್ದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಇವತ್ತು ಮಹಿಳೆ ಸಾಧನೆ ಮಾಡದ ಕೇತ್ರ ಯಾವುದೂ ಉಳಿದಿಲ್ಲ. ವೈಜ್ಞಾನಿಕ, ಕ್ರೀಡೆ ಹೀಗೆ ಎಲ್ಲ ಕೇತ್ರಗಳಲ್ಲಿ ಮಹಿಳೆಯರು ಮುಂದೆ ಇದ್ದೇವೆ. ಆದರೆ ಮಹಿಳೆಯರ ಸಾಧನೆಯನ್ನು ಗುರುತಿಸುವ ಕೆಲಸಗಳಾಗುತ್ತಿಲ್ಲ. ಅದಕ್ಕೆ ತಲೆ ಕೆಡಿಸಿಕೊಳ್ಳದೇ ಸಾಧನೆ ಮಾಡುವುದರತ್ತ ಗಮನ ಹರಿಸಬೇಕು ಎಂದರು.

ಇನ್ನೂ ಕಾರ್ಯಕ್ರಮದಲ್ಲಿ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕುಲಪತಿ ಪ್ರೊ.ಬಿ.ಕೆ ತುಳಸಿಮಾಲಾ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಹಾಗೂ ತೊರವಿ ಗ್ರಾಮ ಪಂಚಾಯತ ಅಧ್ಯಕ್ಷೆ ಪದ್ಮಾಬಾಯಿ ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

27/11/2024 09:15 pm

Cinque Terre

31.87 K

Cinque Terre

0

ಸಂಬಂಧಿತ ಸುದ್ದಿ