ಹಾವೇರಿ : ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕರನ್ನ (12) ರಾಕೇಶ ಕೂಲೇರ್ ಹಾಗೂ (12) ಸಂತೋಷ ಚನ್ನಗೌಡ ಎಂದು ಗುರುತಿಸಲಾಗಿದೆ.
ಇಬ್ಬರು ಬಾಲಕರು ಲಿಂಗದಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಕುಮುದ್ವತಿ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈಜಲು ಬಾರದೆ ಮುಳುಗಿ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಶವ ಹೊರತೆಗೆದಿದ್ದಾರೆ. ಮೃತ ಬಾಲಕರ ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
27/11/2024 10:05 pm