ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಶಕ್ತಿಯೋಜನೆ ಟೀಕಿಸಲು ಚಾಲಕ, ನಿರ್ವಾಹಕರೆ ಕಾರಣ - ಜಿ.ಎಂ.ಕಾಂತಾರಾಜ್

ಕೊಡಗು: ಸರ್ಕಾರದ ಶಕ್ತಿ ಯೋಜನೆಯನ್ನು ಕೆಲವರು ಟೀಕಿಸಲು ಕೆಎಸ್‌ಆರ್‌ಟಿಸಿಯ ಕೆಲ ನಿರ್ವಾಹಕರು ಮತ್ತು ಚಾಲಕರೆ ಕಾರಣ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜ್ ಹೇಳಿದ್ದಾರೆ.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ತಮಗಾದ ಅನುಭವವನ್ನು ಸಭೆಯ ಗಮನಕ್ಕೆ ತಂದರು. ಸಭ್ಯತೆಯನ್ನು ಕಲಿಸುವ ತರಬೇತಿ ಕಾರ್ಯಾಗಾರ ಆಯೋಜಿಸುವ ಅನಿವಾರ್ಯತೆ ಇದೆ ಎಂದರು.

ನನಗೂ ನಿರ್ವಾಹಕ ಅವಮಾನ ಮಾಡಿದ್ದ, ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ತೋರಿಸುವ ಮೊದಲೆ ಪೂರ್ಣ ಪ್ರಮಾಣದ ಟಿಕೆಟ್ ಹರಿದಾಗ, ನಾನು ಗುರುತಿನ ಚೀಟಿ ತೋರಿಸಿದ ಸಂದರ್ಭ, ಬಸ್ ಹತ್ತುವಾಗಲೇ ಗುರುತಿನ ಚೀಟಿ ಹಿಡಿದುಕೊಂಡು ಬರಬೇಕು ಎಂದು ಅಸಭ್ಯವಾಗಿ ವರ್ತಿಸಿ ಮುಂದೆ ಹೋದ. ನಾನು ಪೂರ್ಣ ಪ್ರಮಾಣದ ಟಿಕೆಟ್ ಹಣವನ್ನು ನೀಡಿ ಪ್ರಯಾಣ ಮಾಡಿದೆ. ಕೊನೆಗೆ ಅವನಿಗೆ ತಪ್ಪು ಮನವರಿಕೆ ಆಗಿ, ಅರ್ಧ ಹಣವನ್ನು ವಾಪಸ್ ನೀಡಿದ. ನಂತರ ನಾನು ದೂರು ನೀಡಲಿಲ್ಲ ಎಂದು ಹೇಳಿದರು. ಹಿರಿಯ ನಾಗರಿಕರಿಗೆ ನೀಡುವ ರಿಯಾಯಿತಿ ಹಣವನ್ನು ಸರ್ಕಾರ ಕೆಎಸ್‌ಆರ್‌ಟಿಸಿಗೆ ಭರಿಸುತ್ತದೆ. ಅವರು ಭಿಕ್ಷೆ ಕೊಡುವುದಲ್ಲ ಎಂದು ಹೇಳಿದರು.

Edited By : Somashekar
PublicNext

PublicNext

28/11/2024 12:05 pm

Cinque Terre

13.88 K

Cinque Terre

0

ಸಂಬಂಧಿತ ಸುದ್ದಿ