ಬೆಂಗಳೂರು: ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಜೊತೆಗೆ ಫೆಂಗಲ್ ಸೈಕ್ಲೋನ್ ಪರಿಣಾಮ ತಮಿಳನಾಡಿನಲ್ಲಿ ಡಿಸೆಂಬರ್ 1ರವರೆಗೂ ಭಾರೀ ಮಳೆ ಸಾಧ್ಯತೆ ಇದೆ. ಚೆನ್ನೈನಲ್ಲಿ ಭಾರೀ ಮಳೆಯಾಗ್ತಿರೋ ಹಿನ್ನೆಲೆ ತಮಿಳುನಾಡಿನ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲೂ ಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, ಇಂದು ಕೋಲಾರ ಜಿಲ್ಲೆಯಲ್ಲಿ ಹಗುರ ಮಳೆ ಸಾಧ್ಯತೆ ಇದೆ. ನವೆಂಬರ್29 ರಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಗೆ ಹಗುರದಿಂದ ಸಾಧಾರಣ ಮಳೆಯಾಗೋ ನಿರೀಕ್ಷೆ ಇದೆ. ಬೆಂಗಳೂರು ಸೇರಿ ಶಿವಮೊಗ್ಗ ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಟ ತಾಪಮಾನ 12-14 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯೋ ಸಾಧ್ಯತೆ ಇದೆ ಎಂದಿದ್ದಾರೆ.
PublicNext
28/11/2024 12:07 pm