ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ವೇಶ್ಯಾವಾಟಿಕೆ ನಡೆಸುತ್ತಿದ್ದ ಬಸವ ಲಾಡ್ಜ್ ಮೇಲೆ ಪೊಲೀಸರ ದಾಳಿ.!

ವಿಜಯಪುರ: ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿ ಲಾಡ್ಜ್ ಮ್ಯಾನೇಜರ್‌ನನ್ನ ವಶಕ್ಕೆ ಪಡೆದಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಬಸವ ಲಾಡ್ಜ್‌ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಾಳಿಕೋಟಿ ಪೊಲೀಸರು ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಇನ್ನು ದಾಳಿ ವೇಳೆ ಶರಣು ನಾಗಪ್ಪ ನಾಲತವಾಡ,(46) ಶರಣಪ್ಪ ಶಿವಪ್ಪ ಬಳೂಲಗಿ (55), ಶಿವಯ್ಯ ಶಾಂತಯ್ಯಾ ಮದ್ದಾಲಿ(29) ಎಂಬುವರನ್ನ ವಶಕ್ಕೆ ಪಡೆಯಲಾಗಿದೆ.

ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರು ಮಹಿಳೆಯರನ್ನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಲಾಗಿದೆ. ಈ ಕುರಿತು ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮಂಜು ಕಲಾಲ, ಪಬ್ಲಿಕ ನೆಕ್ಸ್ಟ ವಿಜಯಪುರ

Edited By : Ashok M
PublicNext

PublicNext

28/11/2024 01:26 pm

Cinque Terre

16.73 K

Cinque Terre

0